ದೀಗುಜ್ಜೆ ಪೋಡಿ

May 20, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ದೀಗುಜ್ಜೆ ಪೋಡಿ

ಬೇಕಪ್ಪ ಸಾಮಾನುಗೊ:

  • 1 ಸಣ್ಣ ದೀಗುಜ್ಜೆ
  • 1 ಕಪ್(ಕುಡ್ತೆ) ಅಕ್ಕಿ ಹೊಡಿ ಅಥವಾ ಗಟ್ಟಿಗೆ ಕಡದ ಬೆಣ್ತಕ್ಕಿ(ಸೋನಾ ಮಸೂರಿ ಅಕ್ಕಿದು ಆದರೆ ಒಳ್ಳೆದು) ಹಿಟ್ಟು
  • 3/4 -1 ಚಮ್ಚೆ ಮೆಣಸಿನ ಹೊಡಿ
  • ದೊಡ್ಡ ಚಿಟಿಕೆ ಇಂಗು
  • ರುಚಿಗೆ ತಕ್ಕಸ್ಟು ಉಪ್ಪು
  • 10-15 ಜೀರಿಗೆ
  • 10-15 ಓಮ
  • ಎಣ್ಣೆ ಹೊರಿವಲೆ

ಮಾಡುವ ಕ್ರಮ:

ದೀಗುಜ್ಜೆಯ ಹೆರಾಣ ಚೋಲಿ, ಒಳಾಣ ಗೂಂಜು ಎಲ್ಲ ತೆಗದು, ಕೆಳಾಣ ಚಿತ್ರಲಿ ತೋರ್ಸಿದ ಹಾಂಗೆ ಉದ್ದ-ಉದ್ದಕೆ ತೆಳ್ಳಂಗೆ ಕೊರದು, ಒಂದು ಹತ್ತು ನಿಮಿಷ  ಉಪ್ಪು ನೀರಿಲ್ಲಿ ಹಾಕಿ ತೆಗದು ಮಡುಗಿ.

ಒಂದು ಪಾತ್ರಲ್ಲಿ ಅಕ್ಕಿ ಹಿಟ್ಟು/ಹೊಡಿ, ಇಂಗು, ಮೆಣಸಿನ ಹೊಡಿ, ಉಪ್ಪು, ಜೀರಿಗೆ, ಓಮವ ಹಾಕಿ, ಅದಕ್ಕೆ ಬೇಕಾದಸ್ಟು ನೀರುದೆ ಹಾಕಿ
ಲಾಯಿಕಲಿ ಕಲಸಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಸ್ಟು ಹದ ಇರಲಿ.

ಒಂದು ಬಾಣಲೆಲಿ ಎಣ್ಣೆ ಮಡುಗಿ ಬೆಶಿ ಮಾಡಿ.
ಅದು ಬೆಶಿ ಆದಪ್ಪಗ, ದೀಗುಜ್ಜೆಯ ಹಿಟ್ಟಿಲ್ಲಿ ಅದ್ದಿ ಎಣ್ಣೆಗೆ ಹಾಕಿ ಅದು ಕರು-ಕುರು ಅಪ್ಪನ್ನಾರ ಬೇಶಿ(ಎಣ್ಣೆಯ ಗುಜು ಗುಜು ಅಜನೆ ನಿಂದರೆ ಆತು ಹೇಳಿ ಲೆಕ್ಕ.)
ಬೆಶಿ ಬೆಶಿ ತಿಂಬಲೆ ಕೊಡಿ.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~

ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಶೇಡಿಗುಮ್ಮೆ ಪುಳ್ಳಿವಿದ್ವಾನಣ್ಣಪ್ರಕಾಶಪ್ಪಚ್ಚಿದೊಡ್ಮನೆ ಭಾವಚೂರಿಬೈಲು ದೀಪಕ್ಕಡಾಮಹೇಶಣ್ಣಕಜೆವಸಂತ°ಶ್ರೀಅಕ್ಕ°ಪವನಜಮಾವನೆಗೆಗಾರ°ನೀರ್ಕಜೆ ಮಹೇಶಕಳಾಯಿ ಗೀತತ್ತೆಅಕ್ಷರದಣ್ಣಸಂಪಾದಕ°ಎರುಂಬು ಅಪ್ಪಚ್ಚಿಗೋಪಾಲಣ್ಣವಸಂತರಾಜ್ ಹಳೆಮನೆಉಡುಪುಮೂಲೆ ಅಪ್ಪಚ್ಚಿಒಪ್ಪಕ್ಕvreddhiತೆಕ್ಕುಂಜ ಕುಮಾರ ಮಾವ°ದೊಡ್ಡಮಾವ°ಕೊಳಚ್ಚಿಪ್ಪು ಬಾವವಾಣಿ ಚಿಕ್ಕಮ್ಮದೇವಸ್ಯ ಮಾಣಿಚುಬ್ಬಣ್ಣ
ಬೈಲಿನ ಮೋರೆಪುಟ
ಸದ್ಯದ ಪಟಂಗೊ

ಬೆಣಚ್ಚಿಪ್ಪಲ್ಲಿ ಹುಡ್ಕಲೆ