ಕುಂಬಳಕಾಯಿ ಬೋಳುಕೊದಿಲು

February 18, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಕುಂಬಳಕಾಯಿ ಬೋಳುಕೊದಿಲು

ಬೇಕಪ್ಪ ಸಾಮಾನುಗೊ:

  • 1/4 ಸಾಧಾರಣ ಗಾತ್ರದ ಕುಂಬಳಕಾಯಿ
  • 1-2 ಹಸಿಮೆಣಸು
  • ಚಿಟಿಕೆ ಅರುಶಿನ ಹೊಡಿ
  • ಸಣ್ಣ ನಿಂಬೆ ಗಾತ್ರದ ಬೆಲ್ಲ
  • ಚಿಟಿಕೆ ಹುಳಿ
  • ರುಚಿಗೆ ತಕ್ಕಸ್ಟು ಉಪ್ಪು
  • 1-2 ಮುರುದ ಒಣಕ್ಕು ಮೆಣಸು
  • ಚಿಟಿಕೆ ಇಂಗು
  • 5-6 ಬೇನ್ಸೊಪ್ಪು
  • 1 ಚಮ್ಚೆ ಸಾಸಮೆ
  • 1 ಚಮ್ಚೆ ಎಣ್ಣೆ

ಮಾಡುವ ಕ್ರಮ:

ಕುಂಬಳಕಾಯಿಯ ಹೆರಾಣ ಚೋಲಿ, ಒಳಾಣ ತಿರುಳು, ಬಿತ್ತು ಎಲ್ಲ ತೆಗದು, ತೊಳದು, ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ತುಂಡು ಮಾಡಿ. ಹಸಿಮೆಣಸಿನ ಸಿಗುದು ಮಡುಗಿ.

ಕುಂಬಳಕಾಯಿ ಬಾಗವ ಒಂದು ಪಾತ್ರಕ್ಕೆ/ಪ್ರೆಶರ್ ಕುಕ್ಕರಿಲ್ಲಿ ಹಾಕಿ, ಉಪ್ಪು, ಬೆಲ್ಲ, ಅರುಶಿನ ಹೊಡಿ, ಹುಳಿ ನೀರು/ಹೊಡಿ , ಬೇಕಪ್ಪಸ್ಟು ನೀರು ಹಾಕಿ ಮುಚ್ಚಲು ಮುಚ್ಚಿ ಬೇಶಿ.(ಪ್ರೆಶರ್ ಕುಕ್ಕರಿಲ್ಲಿ ಆದರೆ 1-2 ಸೀಟಿ ಸಾಕು.)
ಒಗ್ಗರಣೆ ಸಟ್ಟುಗಿಲ್ಲಿ ಸಾಸಮೆ, ಮುರುದ ಒಣಕ್ಕು ಮೆಣಸು, ಎಣ್ಣೆ ಹಾಕಿ ಬೆಶಿ ಮಾಡಿ. ಅದು ಹೊಟ್ಟಿ ಅಪ್ಪಗ, ಇಂಗು, ಬೇನ್ಸೊಪ್ಪು ಹಾಕಿ ರೆಜ್ಜ ಹೊತ್ತು ಮಡುಗಿ, ಬೋಳುಕೊದಿಲಿಂಗೆ ಹಾಕಿ ತೊಳಸಿ.
ಇದು  ಅಶನದ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣದೇವಸ್ಯ ಮಾಣಿಕಳಾಯಿ ಗೀತತ್ತೆಜಯಶ್ರೀ ನೀರಮೂಲೆವಿದ್ವಾನಣ್ಣಸುವರ್ಣಿನೀ ಕೊಣಲೆಅಜ್ಜಕಾನ ಭಾವಬಂಡಾಡಿ ಅಜ್ಜಿಪುಣಚ ಡಾಕ್ಟ್ರುಪ್ರಕಾಶಪ್ಪಚ್ಚಿರಾಜಣ್ಣವೇಣೂರಣ್ಣಅಕ್ಷರ°ಮಂಗ್ಳೂರ ಮಾಣಿಅಕ್ಷರದಣ್ಣಒಪ್ಪಕ್ಕನೆಗೆಗಾರ°ಕೇಜಿಮಾವ°ವಾಣಿ ಚಿಕ್ಕಮ್ಮಕಜೆವಸಂತ°ಸಂಪಾದಕ°ಹಳೆಮನೆ ಅಣ್ಣಶೀಲಾಲಕ್ಷ್ಮೀ ಕಾಸರಗೋಡುಗಣೇಶ ಮಾವ°ಶರ್ಮಪ್ಪಚ್ಚಿಅಡ್ಕತ್ತಿಮಾರುಮಾವ°ಎರುಂಬು ಅಪ್ಪಚ್ಚಿ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?
ಹಸ್ತೋದಕ ಕೊಟ್ಟಪ್ಪದ್ದೆ ಸಾರಿನ ಕವಂಗ ನೆಗ್ಗಿ ಆತು
ಊದು ವನಮಾಲಿ ಮುರಳಿಯಾ

ಬೆಣಚ್ಚಿಪ್ಪಲ್ಲಿ ಹುಡ್ಕಲೆ