ಚೆನ್ನಬೆಟ್ಟಣ್ಣನ ಚಿನ್ನದಂತಾ ಪಟಂಗೊ…

ಚೆನ್ನಬೆಟ್ಟಣ್ಣನ ಗುರ್ತ ಇದ್ದನ್ನೇ?
ಆಟದ ಶುದ್ದಿ ಮಾತಾಡುವಗ ಅವರ ಬಗ್ಗೆ ಸುಮಾರು ಸರ್ತಿ ಮಾತಾಡಿದ್ದು.
ನೆಗೆನೆಗೆ ಮೋರೆಲಿ ಯೇವತ್ತೂ ಉಲ್ಲಾಸಲ್ಲಿ ಇದ್ದೊಂಡಿಕ್ಕು!
ಅವರ ಮೂಲ ಚೆನ್ನಬೆಟ್ಟು ಆದರೂ, ಈಗ ಬೆಂಗುಳೂರಿಲಿ ಇಪ್ಪದು.
ಎಲ್ಲೇ ಇದ್ದರೂ, ಅವರ ಊರಿನ ಸೆಳೆತ ಇಳುದ್ದಿಲ್ಲೆ.
ನವರಾತ್ರಿ ಆಚರಣೆಗೆ ಚೆನ್ನಬೆಟ್ಟು ಮಟಕ್ಕೆ ಒರಿಶಂಪ್ರತಿ ಬಂದೇ ಬಕ್ಕು!
ಹತ್ತರೆ ಎಲ್ಲೇ ಸಂಗೀತ ಕಛೇರಿ, ಡೇನ್ಸು, ಬರತನಾಟ್ಯ ಆವುತ್ತರೂ, ಸೌಕರ್ಯ ಇದ್ದರೆ ಹೋಗಿಯೇ ಹೋಕು! ಯಕ್ಷಗಾನ ಅಂತೂ ಬಿಡ್ತ ಪ್ರಶ್ನೆಯೇ ಇಲ್ಲೆ!
ಬೆಂಗುಳೂರಿಲಿಪ್ಪ ಕೆಲವು ಜವ್ವನಿಗರ ಯಕ್ಷಗಾನದ ಗುಂಪಿನ ಸಕ್ರಿಯ ಸದಸ್ಯ° ಅಡ ಇವು..
ಅವರ ಬ್ಲಡ್ಡು ಗ್ರೂಪು ಯಕ್ಷಗಾನ ಪ್ಲಸ್ ಅಡ, – ಲಾನಣ್ಣ ನೆಗೆಮಾಡ್ತ° ಕೆಲವು ಸರ್ತಿ!
ಅವರತ್ರೊಂದು ಸಣ್ಣ ಸೂಟುಕೇಸಿನಷ್ಟಕೆ ಇಪ್ಪ ಕೆಮರ ಇದ್ದು.
ಎಲ್ಲಿಗೆ ಹೋವುತ್ತರೂ ತೆಕ್ಕೊಂಡು ಬಕ್ಕು. ಚೆಂದಚೆಂದದ ಪಟ ತೆಗಗು.
ತುಂಬಾ ಚೆಂದದ ಪಟಂಗೊ! ನಮುನೆನಮುನೆದು. ಪರಿಸರವೋ – ಡೇನ್ಸುಕಾರ್ಯಕ್ರಮವೋ – ಹೂಗಿಂದೋ, ಮಾವಿನಮೆಡಿಯೋ – ಹೀಂಗೆಂತಾರು..!
ಅವು ತೆಗದ ಒಂದು ಚಂದ್ರನ ಪಟವ ಗುರುಗೊ ಅವರ ವೆಬುಸೈಟಿಲಿ (ಹರೇರಾಮ.ಇನ್) ಲಿ ಹಾಕಿದ್ದವಡ, ಅವಕ್ಕೆ ಕೊಶಿ ಆಗಿ!!
ಓ ಮೊನ್ನೆ ಉಪ್ರಂಗಡಿಯ ಆದಿತ್ಯಹೋಟ್ಳಿನ ಚಳಿಕೋಣೆಯ ಒಳದಿಕೆ ಆಚಕರೆಮಾಣಿಯ ಒಟ್ಟಿಂಗೆ ಕೂದುಗೊಂಡು ಬೆಶಿಚಾಯ ಕುಡ್ಕೊಂಡಿತ್ತಿದ್ದವು. ಒಪ್ಪಣ್ಣನ ಕೈಲಿ ಚೆಂದಕೆ ಮಾತಾಡಿದವು. ಅವು ಪಟತೆಗೆತ್ತ ಶುದ್ದಿ ಎಲ್ಲ ಬಂತು –
ಬೈಲಿಂಗೆ ತೋರುಸುವನಾ – ಕೇಳಿದ್ದಕ್ಕೆ ಸಂತೋಷಲ್ಲಿ ಕೊಟ್ಟು ಕಳುಸಿದವು.
ಒಂದು ಸರ್ತಿಂಗೆ ಕೊಟ್ಟದರ್ಲಿ ಒಪ್ಪಣ್ಣಂಗೆ ನಾಕುಸರ್ತಿ ಹಾಕುವಷ್ಟಕೆ ಆತು!! ಯಕ್ಷಗಾನದ ಕರ್ಣನ ನೆಂಪಾತೋ ಏನೋ!
ಆಗಲಿ,
ಎಲ್ಲವುದೇ ಚೆಂದಚೆಂದದ ಪಟಂಗೊ. ದೊಡ್ಡದೊಡ್ಡದು.
ದೊಡ್ಡಕೆಮರಲ್ಲಿ ತೆಗದ್ದು ದೊಡ್ಡದೊಡ್ಡದೇ ಬರೆಕ್ಕಲ್ಲದೋ!
ನೋಡಿ, ಹೇಂಗಿದ್ದು ಹೇಳಿ. ಆತೋ?
(ಅವರತ್ರೆ ಇನ್ನುದೇ ತುಂಬ ಪಟಂಗೊ ಇದ್ದಡ!, ಎಲ್ಲ ನಿದಾನಕ್ಕೆ ಕಳುಸುಗು!)
ಪಟ ನೋಡಿ, ಕೊಶಿ ಆದರೆ ಒಪ್ಪಕೊಡಿ!
ಏ°?
~
ಒಪ್ಪಣ್ಣ

ಚೆನ್ನಬೆಟ್ಟಣ್ಣ ತೆಗದ ಪಟಂಗೊ ಸದ್ಯಲ್ಲೇ ಬತ್ತು..

ಕಾದೊಂಡಿರಿ..
~

ಗುರಿಕ್ಕಾರ°

Admin | ಗುರಿಕ್ಕಾರ°

   

You may also like...

1 Response

  1. lana says:

    ಚೆನ್ನಬೆಟ್ಟಣ್ಣನ patanga bharee layka irtu…. ava orkuttili sumaru pata hakidda…

Leave a Reply

 ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ ಈ ಸುಚ್ಚು ಒತ್ತಿ | Ctrl+G to toggle between Kannada - English

Your email address will not be published. Required fields are marked *